ರಾಜ್ಯ

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದವನಿಗೆ ಗ್ರಾಮಸ್ಥರಿಂದ ಬಿತ್ತು ಗೂಸಾ

ಕೊಪ್ಪಳ : ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಗ್ಗಾಮಗ್ಗಾ ಥಳಿಸಿದ ಘಟನೆ ಕೊಪ್ಪಳದ ಕುಕನೂರ ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ ಥಳಿತಕ್ಕೊಳಗಾದ ವ್ಯಕ್ತಿ. ಈತ ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಈತ ಗ್ರಾಮದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆದಕಾರಣ ಗ್ರಾಮಸ್ಥರು ಸೇರಿ ಆತನ ಕೈಕಾಲು ಕಟ್ಟಿ ಹಿಗ್ಗಾಮಗ್ಗಾ ಥಳಿಸಿದ್ದಾರೆ. ಕೊನೆಗೆ ಗ್ರಾಮಸ್ಥರು ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನ ದಲ್ಲಿರಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker