ಕರಾವಳಿ

ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳ ಬಂಧನ

ಉಡುಪಿ, ಅ.2: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿಲಾಗಿದೆ.

ಕಾಟಿಪಳ್ಳ ಒಂದನೆ ಬ್ಲಾಕ್‌ನ ಸಚಿನ್ ಡಿ.ಅಮೀನ್ (37), ಮೂರನೆ ಬ್ಲಾಕ್‌ನ ಅಕ್ಷಯ್ ಶೆಟ್ಟಿಗಾರ್(26), ಜೋಕಟ್ಟೆಯ ಚೇತನ್ ಯಾನೆ ಚೇತು (23), ಕಾಟಿಪಳ್ಳ ಒಂದನೆ ಬ್ಲಾಕ್‌ನ ಸಂಜಿತ್ ಯಾನೆ ಶೈಲೇಶ್(19) ಬಂಧಿತ ಆರೋಪಿಗಳು.

ಇವರನ್ನು ಇಂದು ಸುರತ್ಕಲ್ ಬಳಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಬ್ರಹ್ಮಾವರ ಎಸ್ಸೈ ರಾಘವೇಂದ್ರ ಸಿ. ನೇತೃತ್ವದ ವಿಶೇಷ ತಂಡ ಬಂಧಿಸಿದೆ. ಬಂಧಿತರ ಪೈಕಿ ಸಚಿನ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ ಕೊಲೆ, ಕೊಲೆಗೆ ಯತ್ನ, ಅಪರಹಣ, ಹಲ್ಲೆ, ಇಸಿ ಕಾಯಿದೆಯಡಿ ಪ್ರಕರಣಗಳು ದಾಖಲಾಗಿವೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರು, ಮಾರುತಿ ರಿಟ್ಝ್ ಕಾರು, ಇನೋವಾ ಕಾರು, ಎರಡು ಪಲ್ಸರ್ ಬೈಕ್, ಮಂಡೆ ಕತ್ತಿ, ಸುತ್ತಿಗೆ, ತಲವಾರುಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರ ಪೈಕಿ ಮೂವರು ನ್ಯಾಯಾಂಗ ಬಂಧನ, ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕರ ಕಚೇರಿಯ ಎಎಸ್ಸೈ ಕೃಷ್ಣಪ್ಪ, ಸಿಬ್ಬಂದಿಗಳಾದ ಪ್ರದೀಪ್ ನಾಯಕ್, ವಾಸುದೇವ, ಗಣೇಶ್, ರವೀಂದ್ರ, ಚಾಲಕ ಶೇಖರ್, ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳಾದ ದಿಲೀಪ್, ಚಾಲಕ ಅಣ್ಣಪ್ಪ, ಡಿಸಿಐಬಿ ತಂಡದ ಎಸ್ಸೈ ರವಿಚಂದ್ರ, ಸಿಬ್ಬಂದಿಗಳಾದ ರಾಮು ಹೆಗ್ಡೆ, ರಾಘವೇಂದ್ರ, ಹಿರಿಯಡ್ಕ ಠಾಣಾ ಸಿಬ್ಬಂದಿ ಹರೀಶ್, ಶಿವರಾಜ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker