ರಾಜ್ಯ

ರಾಜ್ಯ1843, ಉಡುಪಿ 40 ಕೊರೊನಾ ಪಾಸಿಟಿವ್ ಕೇಸ್ ಪತ್ತೆ !

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 10 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 981 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1843 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಇಂದು 40 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1361ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker