ರಾಜ್ಯ

ಭುಗಿಲೆದ್ದ ಭಿನ್ನಮತ: ದಿಢೀರ್ ನೇಮಕಾತಿ ಬೆನ್ನಲ್ಲೇ ನಾಲ್ವರು ನಿಗಮ ಮಂಡಳಿ ಅಧ್ಯಕ್ಷರ ನೇಮಕ ಆದೇಶ ವಾಪಸ್

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡಲಾಗಿದ್ದು, ಅನೇಕ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾದ ಹಿನ್ನಲೆಯಲ್ಲಿ ಕೆಲವು ಅಧ್ಯಕ್ಷರ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.

ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷ ಬಸವರಾಜ ದಡೇಸುಗೂರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಲಾಲಾಜಿ ಮೆಂಡನ್, ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ಜಿ.ಹೆಚ್. ತಿಪ್ಪಾರೆಡ್ಡಿ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಪರಣ್ಣ ಮುನವಳ್ಳಿ ಅವರ ನೇಮಕಾತಿ ಆದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಹಿಂಪಡೆದುಕೊಂಡಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker