ಕರಾವಳಿ

ಉಡುಪಿ ಪಾಸಿಟಿವ್ ಬಂದವರ ಮನೆಯ ಸೀಲ್ ಡೌನ್ ಪ್ರಕ್ರಿಯೆ ಪ್ರಾರಂಭ

ಉಡುಪಿ ಮೇ.21: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಾಸಿಟಿವ್ ಬಂದ ಸೋಂಕಿತರ ಮನೆಯನ್ನು ಸೀಲ್ಡೌನ್ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ.

ನಗರದಲ್ಲಿ ಕೊರೋನಾ ಸೋಂಕು ದೃಢಪಟ್ಟ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮನೆಗಳನ್ನು ಸೀಲ್ಡೌನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಮನೆಯವರಲ್ಲಿ ಧೈರ್ಯ ತುಂಬಿ ಕೋವಿಡ್ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಮೇ. 19 ರಂದು ಜಿಲ್ಲೆಯಲ್ಲಿ 914 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 43,427 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5, 56,786 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50048 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 286 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಂದೆಡೆ ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಮುಖ ಆಗುತ್ತಿದ್ದೆ. ಆದರೆ ಮತ್ತೊಂದೆಡೆ ಸೋಂಕಿನಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಜಾಗರೂಕರಾಗಿರುವಂತೆ ಎಚ್ಚರಿಕೆಯ ಕರೆಗಂಟೆ ನೀಡುತ್ತಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker