ಕರಾವಳಿ

ಪ್ರಧಾನಿ ನರೇಂದ್ರ ಮೋದಿಜಿ 70ನೇ ಜನ್ಮದಿನ ಅಂಗವಿಕಲರಿಗೆ ಉಚಿತ ವೀಲ್ ಚೇರ್ ವಿತರಣೆ

ಉಡುಪಿ ಸೆ.17 : ಭಾರತೀಯ ಜನತಾ ಪಾರ್ಟಿ ಉಡುಪಿ ನಗರ, ಅಲ್ಪಸಂಖ್ಯಾತ ಮೋರ್ಚಾ ಉಡುಪಿ ನಗರ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಪ್ರಯುಕ್ತ ಅಂಗವಿಕಲರಿಗೆ ಉಚಿತ ವೀಲ್‌ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ನಗರ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸಲೀಂ ಅಂಬಾಗಿಲು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಅಬ್ದುಲ್ ಮುತಾಲಿಕ್ ವಂಡ್ಸೆ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ್ ಮತ್ತು ಸ್ಥಳೀಯ ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜುನೇದ್, ಉಪಾಧ್ಯಕ್ಷ ವಿಲ್ಸನ್ ಮಣಿಪಾಲರವರು ಕಾರ್ಯಕ್ರಮ ಸಂಘಟಿಸಿದರು. ಪ್ರಧಾನ ಕಾರ್ಯದರ್ಶಿ ಫಾರೂಕ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker