ಕರಾವಳಿ

ಉಡುಪಿ :ಜಿಲ್ಲೆಯಲ್ಲಿ ಇಂದು( ಮೇ 28) 766 ಮಂದಿಯಲ್ಲಿ ಕೋವಿಡ್ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಾದಿಯಲ್ಲಿ ಸಾಗುತ್ತಿದ್ದು, ಇಂದು 766 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 285, ಕುಂದಾಪುರ ತಾಲೂಕಿನಲ್ಲಿ 293, ಕಾರ್ಕಳ ತಾಲೂಕಿನಲ್ಲಿ‌ 186 ಹಾಗೂ ಹೊರ ಜಿಲ್ಲೆಯ 2 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5942 ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೂಡ ನಾಲ್ಕು ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 40, 57 ಮತ್ತು 62 ವರ್ಷದ ಮಹಿಳೆಯರು ಹಾಗೂ ಕುಂದಾಪುರ ತಾಲೂಕಿನ 51 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 322 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮೇ 27ರಂದು ಜಿಲ್ಲೆಯಲ್ಲಿ 835 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 27,187 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 214497 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 33261 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 9 ಮಂದಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಹೊರ ಜಿಲ್ಲೆಯ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಡುಪಿ ತಾಲೂಕಿನ ಓರ್ವ ವ್ಯಕ್ತಿ ಈಗಾಗಲೇ ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker