ರಾಜ್ಯ

ಹುಬ್ಬಳ್ಳಿಯಲ್ಲಿ ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಹುಬ್ಬಳ್ಳಿ : ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ಇನ್ನೋವಾ ಮತ್ತು ಬಲೆನೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡುವೆ ಶುಕ್ರವಾರ ರಾತ್ರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತಕ್ಕೀಡಾದ ಕಾರು ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker