ಕರಾವಳಿ

ಉಡುಪಿ: ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯ

ಉಡುಪಿ : ಜಿಲ್ಲೆಯಲ್ಲಿ ಮೇ 19 ರಂದು ಯಾವುದೇ ಕೋವಿಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದಿಲ್ಲ. ಉಡುಪಿ ನಗರ ಪ್ರದೇಶದಲ್ಲಿ ಮಾರ್ಚ್ 25 ಅಥವಾ ಅದಕ್ಕಿಂತ ಮೊದಲು 1 ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡು 2 ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಡೋಸ್, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 40 ಡೋಸ್ ಲಭ್ಯವಿದ್ದು, ಅದನ್ನು ಮೇ 19 ರಂದು ನೀಡಲಾಗುವುದು.

ಮಾರ್ಚ್ 25 ಅಥವಾ ಅದಕ್ಕಿಂತ ಮೊದಲು ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಿಗೆ ಈಗಾಗಲೇ  ಮೇ 14 ರಂದು ಎಸ್.ಎಮ್.ಎಸ್ ಕಳುಹಿಸಲಾಗಿದ್ದು, ಎಸ್.ಎಮ್.ಎಸ್ ಸಂದೇಶ ಇರುವ ಫಲಾನುಭವಿಗಳು ಮೇಲೆ ತಿಳಿಸಿರುವ ಆಸ್ಪತ್ರೆಯನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಆಸ್ಪತ್ರೆಗೆ ಬಂದು ಲಸಿಕೆ ಪಡೆದುಕೊಳ್ಳುವಂತೆ ಹಾಗೂ ಸಾರ್ವಜನಿಕರು ಸಹಕರಿಸುವಂತೆ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker