ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಮೇ.24 : ಇಂದು, ಮೇ.24 ರಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅವರು ಖಾಸಗಿ ಭೇಟಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಭಿನಂದನ್ ಹರೀಶ್, ಮೊದಲಾದವರು ಉಪಸ್ಥಿತರಿದ್ದು, ಡಿಕೆಶಿ ಅವರನ್ನು ಸ್ವಾಗತಿಸಿದರು

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker