ರಾಜ್ಯ

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ.!

ಬೆಂಗಳೂರು:  ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ರು.

ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದ್ರು. ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರ ಸಮಯದಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.ಸದ್ಯ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker