ಕರಾವಳಿ

ಉಡುಪಿ: ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸುವ ಅಗತ್ಯವಿಲ್ಲ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಇಳಿಮುಖವಾಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಶೇ. 19ರಷ್ಟು ಕೊರೊನಾ ಸೋಂಕಿನ ಪ್ರಕರಣಗಳಿವೆ. ಈ ಸೋಂಕಿನ ಪ್ರಮಾಣವನ್ನು ಜೂನ್ 7ರೊಳಗೆ ಶೇ. 10ಕ್ಕಿಂತ ಕೆಳಗೆ ಇಳಿಸಿದಲ್ಲಿ, ಜೂನ್ 7ರ ಬಳಿಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಅವಶ್ಯಕತೆ ಎದುರಾಗುವುದಿಲ್ಲ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಲಾಕ್ ಡೌನ್ ನಿಂದ ಜನರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಜಿಲ್ಲೆಯ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ. ಇದೀಗ ಜಿಲ್ಲೆಯ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿದ್ದು, ಹೀಗಾಗಿ ಲಾಕ್ ಡೌನ್  ಮುಂದುವರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಿ. ಸೋಂಕು ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಅಗತ್ಯವಿಲ್ಲ ಎಂದು ಶಾಸಕರು ಅಭಿಪ್ರಾಯಪಟ್ಟರು.

ಮುಂದಿನ 3 ತಿಂಗಳವರೆಗೆ ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಬೇಕು. ಲಾಕ್ ಡೌನ್ ತೆರವುಗೊಂಡ ಬಳಿಕ ಜನರು ಯಾವುದೇ ಕಾರಣಕ್ಕೂ ಮೈಮರೆಯಬಾರದು. ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬೇಕು. ಜಿಲ್ಲೆಯಲ್ಲಿ ಶೇ. 70ರಷ್ಟು ಲಸಿಕಾ ಅಭಿಯಾನ ಆಗುವವರೆಗೆ ಜನ ಎಚ್ಚರವಹಿಸಬೇಕು ಎಂದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker