ಕರಾವಳಿ

ಉಡುಪಿ: 50ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗ್ರಾಮ ಸಂಪೂರ್ಣ ಲಾಕ್ ಡೌನ್!

ಉಡುಪಿ: ಜಿಲ್ಲೆಯಲ್ಲಿ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಸೋಂಕಿತರು ಇರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ದಿನಾ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. 900 ರ ಆಸುಪಾಸಿನಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳು ಇದೀಗ 600 ರ ಅಂತರದಲ್ಲಿ ಪತ್ತೆಯಾಗುತ್ತಿದೆ. ಅಲ್ಲದೆ ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗುತ್ತಿದೆ. ಆದರೂ ಹಲವೆಡೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ 50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕಿತರು ‌ಇರುವ ಗ್ರಾಮವನ್ನು ಬುಧವಾರ (ಜೂನ್ 2)ದಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಿದೆ ಎಂದು ತಿಳಿದು ಬಂದಿದೆ.

ಅದರಂತೆ ಜಿಲ್ಲೆಯ ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ, ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು 38, ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್ , ಬೆಳ್ವೆ, ಮುದ್ರಾಡಿ, ವರಂಗ ಗ್ರಾಮಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker