ರಾಜ್ಯ

ಕರ್ನಾಟಕದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ : ಸಿಎಂ ಘೋಷಣೆ

ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ಮುಂದೂಡಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಸೋಂಕುವಿನ ಪ್ರಮಾಣ ಮತ್ತಷ್ಟು ನಿಯಂತ್ರಿಸುವ ಸಲುವಾಗಿ ತಜ್ಞರ ಸಲಹೆಯಂತೆ  ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ  ಲಾಕ್ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಿ ಆದೇಶ ನೀಡಿದ್ದಾರೆ ಅಂದರೆ  ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ.

ರಾಜ್ಯ ಸರಕಾರ ಈ ಹಿಂದೆ ಮೊದಲನೇ ಬಾರಿಗೆ ಮೇ 10 ರಂದು ಹದಿನೈದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿತ್ತು, ಎರಡನೇ ಬಾರಿಗೆ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿತ್ತು, ಇದೀಗ ಮೂರನೇ ಬಾರಿಗೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker