ರಾಜ್ಯ

ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ

ಬೆಂಗಳೂರು(Udupi News) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ‌‌‌ಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ‌ ಮಾಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷ ಇತ್ತೀಚೆಗೆ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸರಕಾರ ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ‌ ಮಾಡಿದ್ದಾರೆ.

ರೋಹಿಣಿ ಸಿಂಧೂರಿ‌ ಅವರು ಸಿಎಂ ಜತೆ ಸುಮಾರು ಅರ್ಧ ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ, ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಿಎಂ  ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker