ಕರಾವಳಿತಾಜಾ ಸುದ್ದಿಗಳು

ದ.ಕ,ಉಡುಪಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರವರು ಜೂ. 11 ರಂದು ಪತ್ರಿಕಾ ಮಾಧ್ಯಮದಲ್ಲಿ ಖಾಸಗಿ ಶಾಲೆಗಳ ಬಗ್ಗೆ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಬೇಕು ಎಂದು ದ.ಕ ಹಾಗೂ ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ವತಿಯಿಂದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ವಿವರಿಸಿ, ತಿಳಿಸಲಾಯಿತು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿರವರು ನೀವು ಮನವಿಯಲ್ಲಿ ತಿಳಿಸಿರುವ ಅಂಶಗಳು ಸರಿ ಇದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ದ. ಕ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷ ಮೂಸಬ್ಬ. ಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್‌. ಶೆಟ್ಟಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker