ರಾಜ್ಯ

ಇನ್ನೆರಡು ವರ್ಷಗಳಲ್ಲಿ ಸರ್ವರಿಗೂ ಸಿಗಲಿದೆ ಸೂರು: ಸಿಎಂ ಯಡಿಯೂರಪ್ಪ

ಬೆಂಗಳೂರು : ದೇಶದ ಪ್ರತೀ ಪ್ರಜೆಯೂ ಮನೆ ಹೊಂದಿರಬೇಕು ಅನ್ನೋದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಹೀಗಾಗಿ ಮುಂದಿನ ಎರಡು ವರ್ಷಗಳಲ್ಲಿ ನಿವೇಶನ ರಹಿತರಿಗೆ ಮನೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿವೇಶನ ವಂಚಿತರರು ಹೌಸಿಂಗ್ ಬೋರ್ಡ್ ಅಧಿಕಾರಿಗಳನ್ನು ಸಂಪರ್ಕಿಸಿ ನಿವೇಶನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker