ರಾಜ್ಯ

ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾಲು ಮುರಿದಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಅಲ್ಲದೇ ಅವರ ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ಆಪರೇಶನ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯ ಡಾ.ಅನಿಲ್ ಕುಮಾರ್ ತಿಳಿಸಿದ್ದಾರೆ.

ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನಿಂಗ್ ಮಾಡಿದಾಗ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ತಿಳಿದುಬಂದಿದ್ದು, ತಕ್ಷಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker