ಕರಾವಳಿ

ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

ಉಡುಪಿ ಜ.27: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳ ಸಾಧನೆಯನ್ನು ಮೆಚ್ಚಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಅಭಿವೃದ್ಧಿಯನ್ನು ಬೆಂಬಲಿಸಿ ಪೆರಂಪಳ್ಳಿ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಅವರು ಬೆಂಬಲಿಗರೊಂದಿಗೆ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ವಿನಯ್ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಅರುಣಾ ಪೂಜಾರಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker