ಕರಾವಳಿ

ಮಂಗಳೂರು ವಿವಿಯ ಬಾಕಿ ಪರೀಕ್ಷೆಗಳನ್ನು ಮುಂದುವರಿಸಿ: ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ ಸೂಚನೆ..!

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ ೧೧ ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ.

ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೆರೆಯ ರಾಜ್ಯ ಕೇರಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ ೪ ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker