ಕರಾವಳಿ

ಶಾಸಕ ರಘುಪತಿ‌ ಭಟ್ ಕೃಷಿ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಮೂಡುಬೆಟ್ಟು ಬಾವಲಿ ಮನೆ ರಸ್ತೆಯ ಮಾಧವ ಆಚಾರ್ಯರ ಮನೆ ಬಳಿಯ 30 ಎಕರೆ ಹಡಿಲು ಭೂಮಿ ಕೃಷಿಯ ಯಂತ್ರ ನಾಟಿ ಕಾರ್ಯಕ್ಕೆ ಕೃಷಿ ಸಚಿವರಾದ ಬಿ ಸಿ ಪಾಟೀಲ್ ಮತ್ತು ಶಾಸಕರಾದ ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಯಂತ್ರ ಚಲಾಯಿಸುವ ಮೂಲಕ ಚಾಲನೆ ನೀಡಿದರು.

ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಹಡಿಲು ಭೂಮಿ ಕೃಷಿ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದಲ್ಲಿ, ರಾಜ್ಯದಲ್ಲಿ ಹಡಿಲು ಬಿದ್ದಿರುವ 15 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯನ್ನು ಹಸನಾಗಿಸಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಕಡೆಕಾರಿನಲ್ಲಿ ಶನಿವಾರ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. , ಶಾಸಕ ರಘುಪತಿ‌ ಭಟ್ ಕೃಷಿ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಅವರ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್‌ ವತಿಯಿಂದ ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ ಎಂದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker