ಕರಾವಳಿ

ಕಾರ್ಕಳ : ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ

ಕಾರ್ಕಳ: ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ಕಂಪ್ಯೂಟರ್‌ ವಿತರಣೆ, 200ಲೀಟರ್‌ ಸಾಮರ್ಥ್ಯದ ಸಂಸ್ಥೆಯ ಫಿಲ್ಟರ್‌ ಕುಡಿಯುವ ನೀರಿನ ವ್ಯವಸ್ಥೆಯ ಉದ್ಘಾಟನೆ ಮತ್ತು ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್‌ ಲಸಿಕಾ ಅಭಿಯಾನ ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಜೂ.29 ರಂದು ನಡೆಯಿತು.

ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾ ಹಿಂಜರಿಕೆಯಿಂದ ಧೃತಿಗೆಡದೆ ಸರಕಾರದ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಮೋನಪ್ಪ ಹೆಚ್.‌ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರ ಮತ್ತು ಶಾಸಕರ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಲೆವಿನಾ, ಸಂಸ್ಥೆಯ ರಿಜಿಸ್ಟ್ರಾರ್‌ ಶೋಭಾ ಕೆ. ಎನ್‌, ಕಂಪ್ಯೂಟರ್‌ ವಿಭಾಗದ ವಿಭಾಗಾಧಿಕಾರಿ ಸುನಿಲ್‌ ಬಿ. ಪಿ. ಉಪಸ್ಥಿತರಿದ್ದರು. ಆಡಳಿತ ವಿಭಾಗದ ಗುಣಪಾಲ ಜೈನ್‌ ಕಾರ್ಯಕ್ರಮ ನಿರೂಪಿಸಿ, ಶೋಭಾ ಕೆ. ಎನ್.‌ ಸ್ವಾಗತಿಸಿದರು. ಬಾಲಚಂದ್ರ ಹೆಬ್ಬಾರ್‌ ವಂದಿಸಿದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker