ಕರಾವಳಿ

ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಗೆ ಡಾll ವಿ.ಎಸ್ ಆಚಾರ್ಯ ರಸ್ತೆ ನಾಮಕರಣ – ಸಚಿವ ಜಗದೀಶ್ ಶೆಟ್ಟರ್ – ರಘುಪತಿ ಭಟ್ ಉದ್ಘಾಟನೆ

ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಯನ್ನು ಡಾll. ವಿ. ಎಸ್. ಆಚಾರ್ಯ ರಸ್ತೆ ಎಂದು ಈಗಾಗಲೇ ನಾಮಕರಣ ಮಾಡಿದ್ದು, ಈ ರಸ್ತೆಯನ್ನು ಡಾll. ವಿ.ಎಸ್ ಆಚಾರ್ಯ ಅವರ ಜನ್ಮದಿನವಾದ ಇಂದು ದಿನಾಂಕ 06-07-2021 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಗದೀಶ್ ಶೆಟ್ಟರ್ ಅವರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ನಾಮ ಫಲಕದ ಉದ್ಘಾಟನೆ ನೆರವೇರಿಸಿ ಅಧಿಕೃತವಾಗಿ ಘೋಷಿಸಿ ಡಾll ವಿ.ಎಸ್ ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ ಮತ್ತು ಜಿಲ್ಲಾಧಿಕಾರಿಗಳ ಜಿ ಜಗದೀಶ್, ನಗರ ಸಭೆಯ ಅಧಿಕಾರಿಗಳು ಹಾಗೂ ನಗರ ಸಭೆಯ ಸದಸ್ಯರು ಮತ್ತು ಡಾll. ವಿ. ಎಸ್ ಆಚಾರ್ಯರ ಪುತ್ರರಾದ ಕಿರಣ್ ಆಚಾರ್ಯ, ರವಿರಾಜ್ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker