ರಾಜ್ಯ

ಹವಾಮಾನ ಇಲಾಖೆ ಮುನ್ಸೂಚನೆ ; ಮುಂದಿನ 2 ದಿನಗಳು ದಕ್ಷಿಣ ಕನ್ನಡ ಸೇರಿ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ !

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಅಬ್ಬರ ಮುಂದುವರೆದಿದೆ , ಮತ್ತೆ ಮುಂದಿನ 2 ದಿನಗಳ ಕಾಲ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಾದ್ಯಂತ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಅವರು, ರಾಜ್ಯದಲ್ಲಿ ಮುಂದಿನ 2 ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ. ಜು.18ರವರೆಗೆ  ಉಡುಪಿ ಚಿಕ್ಕಮಗಳೂರು, ಕೊಡಗು,  ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ.16 ಮತ್ತು 17ರಂದು ಬೀದರ್, ಕಲಬುರ್ಗಿ, ಚಾಮರಾಜನಗರ, ಹಾವೇರಿ, ದಾವಣಗೆರೆ ಮತ್ತು ಯಾದಗಿರಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker