ಕರಾವಳಿ

ಕಾರ್ಕಳ : ಬಜಗೋಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಸ್ಕೂಟರ್ ಅಪಘಾತ,

ಕಾರ್ಕಳ : ಕಾರು ಮತ್ತು ದ್ವಿಚಕ್ರದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ಬಜಗೋಳಿ ಕಂಬಳ ಕ್ರೀಡಾಂಗಣದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಂಜನಕ್ಯಾರ್ ಶೇಖರ್ ದೇವಾಡಿಗ (೭೨) ಎಂಬವರು ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೂಕ್ರ ಎಂಬವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಬಜಗೋಳಿಯಿಂದ ದಿಡಿಂಬಿರಿಯ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸವಾರರಿಬ್ಬರು ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದರು. ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker