ರಾಜ್ಯ

SSLC ಫಲಿತಾಂಶ ನಾಳೆ ಪ್ರಕಟ.

2020-2021 ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಶನಿವಾರ ಪ್ರಕಟಗೊಳ್ಳಲಿದೆ.
ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಾಳೆಯೇ ಫಲಿತಾಂಶ ಪ್ರಕಟಿಸಲಿದೆ ಎಂದು ನಿರ್ದೇಶಕಿ ವಿ. ಸುಮಂಗಲ ಹೇಳಿದ್ದಾರೆ.

ಗುರುವಾರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸದಸ್ಯರ ಸಭೆ ನಡೆಸಿದ್ದು , ಈ ಸಭೆಯಲ್ಲಿ ಫಲಿತಾಂಶ ಪ್ರಕಟಿಸಲು ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ . ಈ ಸಭೆಯ ನಡಾವಳಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದು , ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಫಲಿತಾಂಶಕ್ಕೆ ಅನುಮತಿ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಬಳಿ ಚರ್ಚೆ ನಡೆಸಿ ನಾಳೆ ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ವಿ. ಸುಮಂಗಲ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದು, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ೨ ದಿನಗಳಲ್ಲಿ ಮುಗಿಸಲಾಗಿತ್ತು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker