ಕರಾವಳಿ

ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ದಿನಾಂಕ 15-07-2021ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.

ಕೆಎಸ್ ಕೃಷ್ಣಾರೆಡ್ಡಿ, ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ, ಬಿ. ಗುರುಪ್ರಸಾದ್, ಮುಖ್ಯ ಯೋಜನಾಧಿಕಾರಿ, ಶಿವಯೋಗಿ ಹಿರೇಮಠ, ಮುಖ್ಯ ಇಂಜಿನಿಯರ್ ಲೋಕೋಪಯೋಗಿ ಇಲಾಖೆ ಬೆಂಗಳೂರು, ಪಿ. ಆರ್. ಶಿವಪ್ರಸಾದ್ ಐಎಎಸ್, ವ್ಯವಸ್ಥಾಪಕ ನಿರ್ದೇಶಕರು ಕೆ. ಆರ್. ಡಿ. ಸಿ. ಎಲ್., ವೀರಭದ್ರಯ್ಯ ಬಿ, ಆರ್., ಮುಖ್ಯ ಇಂಜಿನಿಯರ್ ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆ, ಬಿ. ಟಿ. ಕಾಂತರಾಜ್, ಮುಖ್ಯ ಇಂಜಿನಿಯರ್ ಲೋಕೋಪಯೋಗಿ ಇಲಾಖೆ ಶಿವಮೊಗ್ಗ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker