ಕರಾವಳಿ

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ – ಶಾಸಕ ರಘುಪತಿ ಭಟ್ ಉದ್ಘಾಟನೆ

ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ, ಉಡುಪಿ ಇಲ್ಲಿ ರೂ. 55.00 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಇಂದು ದಿನಾಂಕ 02-08-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆರ್, ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಸ್ಥಳೀಯ ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ಸುಂದರ್ ಜೆ. ಕಲ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪಾಂಡುರಂಗ ಮಲ್ಪೆ, ಪ್ರಾಂಶುಪಾಲರಾದ ವರ್ಗೀಸ್ ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿಯವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker