ಕರಾವಳಿ

ಗಂಗೊಳ್ಳಿ : ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಗಂಗೊಳ್ಳಿ ಸೆ. 17 : ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿನ ಗಂಗೊಳ್ಳಿ ಯಲ್ಲಿ ನಡೆದಿದೆ. ಗಂಗೊಳ್ಳಿ ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತನನು ರಕ್ಷಿಸಲು ಹೋದ ಇನ್ನಿಬ್ಬರು ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಂಗೊಳ್ಳಿ ಖಾರ್ವಿಕೇರಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಭಕ್ತರು ಸೇರಿದ್ದರು. ಈ ಸಂದರ್ಭ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ನೋಡ ನೋಡುತ್ತಿದ್ದಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಹತ್ತಿರದಲ್ಲಿದ್ದ ಕಾಲುದೀಪದಲ್ಲಿ ಉರಿಯುತ್ತಿದ್ದ ಬೆಂಕಿ ತಗುಲಿ ಬೆಂಕಿ ರಾಘವೇಂದ್ರ ಖಾರ್ವಿಯನ್ನು ಆವರಿಸಿಕೊಂಡಿತು. ಆತನನ್ನು ರಕ್ಷಿಸಲು ಹೋದ ಲಕ್ಷ್ಮಣ್ ಖಾರ್ವಿ, ಜನಾರ್ದನ ಖಾರ್ವಿಯವರಿಗೂ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿಯ ತೀವ್ರತೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ರಾಘವೇಂದ್ರ ಖಾರ್ವಿ ಹಾಗೂ ಬೆಂಕಿ ನಂದಿಸಲು ಪ್ರಯತ್ನಿಸಿ ಬೆಂಕಿಯಿಂದ ಗಾಯಗೊಂಡವರನ್ನು ತಕ್ಷಣ ಗಂಗೊಳ್ಳಿಯ ಆಪತ್ಭಾಂದವ ಆಂಬುಲೆನ್ಸ್ ಇಬ್ರಾಹಿಂ ಹಾಗೂ ತಂಡ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ರಾಘವೇಂದ್ರ ಖಾರ್ವಿಯವರ ಸ್ಥಿತಿ ಗಂಭೀರವಾಗಿದ್ದು, ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ಸರಿಯಾಗಿ ತಿಳಿದು ಬಂದಿಲ್ಲ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker