ರಾಜ್ಯ

ಡ್ರಗ್ಸ್ ಜಾಲ : ಡ್ಯಾನ್ಸರ್ ಕಿಶೋರ್ ಶೆಟ್ಟಿ ಪೊಲೀಸ್ ವಶಕ್ಕೆ

ಮಂಗಳೂರು, ಸೆ.19: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ ಆರೋಪದ ಅಡಿಯಲ್ಲಿ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯವರನ್ನು ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಈ ಬಗ್ಗೆ ಅಧಿಕೃತ ಪ್ರಕಟನೆ ಇನ್ನಷ್ಟೆ ಹೊರಬೀಳ ಬೇಕಾಗಿದೆ. ಕಿಶೋರ್ ಶೆಟ್ಟಿ ಬಾಲಿವುಡ್ ಚಿತ್ರ ‘ಎಬಿಸಿಡಿ’ ಸಹಿತ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದರು. ಅಲ್ಲದೆ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋದಲ್ಲೂ ಸ್ಪರ್ಧಿಸಿದ್ದರು.

ಸದ್ಯ, ಡ್ರಗ್ಸ್ ಜಾಲದ ಜೊತೆ ನಂಟು ಹೊಂದಿದ ಆರೋಪ ದಡಿಯಲ್ಲಿ ಇವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಇದರಲ್ಲಿ ಶಾಮೀಲಾಗಿರುವ ಇತರರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker