ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ, ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ : ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಜನರು ಎಚ್ಚರಿಕೆಯಿಂದ ಇರುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉಡುಪಿ ಜೆಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶ ಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆ ಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರವಾಹದ ಭೀತಿಯಿರುವ ಕಾರಣದಿಂದ ಇನ್ನು ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಗಳಾದ ಶ್ರೀ ಟಿ. ಎಂ ವಿಜಯ ಭಾಸ್ಕರ್ ಅವರೊಂದಿಗೆ ಕೇಳಿಕೊಡಿದ್ದೇನೆ, ಇದಕ್ಕೆ ಪ್ರತಿಯಾಗಿ ಈಗಾಗಲೇ ಮಂಗಳೂರಿನಿಂದ ಒಂದು NDRF ತಂಡವನ್ನು ಕಳುಹಿಸಿ ಕೊಟ್ಟಿರುತ್ತಾರೆ ಎಂದು ಮಾಹಿತಿ ನೀಡಿದರು.

20 ಜನರ NDRF ತಂಡವನ್ನು ಮೈಸೂರಿನಿಂದ ಇದಿಗಲೇ ಕಳುಹಿಸಿಕೊಡಲಾಗಿದೆ ಹಾಗೂ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಗಳನ್ನು ಬೆಂಗಳೂರು ಹಾಗೂ ಕಾರವಾರ ಕೇಂದ್ರದಿಂದ ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಿ ಕೊಡುವುದಾಗಿ ತಿಳಿಸಿದ್ದಾರೆ ಎಂದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker