ಕರಾವಳಿ

ಬಿರುಕು ಬಿಟ್ಟ ಮುಳ್ಳಿಕಟ್ಟೆ ಅರಾಟೆ ಸೇತುವೆ – ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ : ನಿರ್ಮಾಣಗೊಂಡ ಮೂರೇ ವರ್ಷಗಳಲ್ಲಿ ಬೈಂದೂರು-ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ಮುಳ್ಳಿಕಟ್ಟೆ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುತ್ತದೆ ಎಂದು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಚುರವಾಗಿರುತ್ತದೆ. ಈ ಬಗ್ಗೆ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿರುತ್ತದೆ. ಈ ಬಗ್ಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿಗೆ ಸೂಚಿಸಲಾಗಿತ್ತು.

ಬಿರುಕು ಕಾಣಿಸಿಕೊಂಡಿರುವುದರ ಬಗ್ಗೆ ತಾಂತ್ರಿಕ ತಜ್ಞರ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದು, ವರದಿಯಂತೆ ಸೇತುವೆ ರಚನೆಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸೇತುವೆಯ ಮೇಲ್ಬಾಗದಲ್ಲಿ ಮಾತ್ರ ಬಿರುಕು ಕಂಡು ಬಂದಿದ್ದು, ಸ್ವಾನ್ ಜಾಯಿಂಟ್ ನಲ್ಲಿ ಕಂಡು ಬಂದಿರುವುದರಿಂದ ಅಪಾಯವಿಲ್ಲ ಹಾಗೂ ಸೇತುವೆ ಮೂಲ ರಚನೆಯಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker