ಕರಾವಳಿ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2020 ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಅ.1 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ ವಕೀಲರ ಸಂಘ(ರಿ.), ಉಡುಪಿ ಹಿರಿಯ ನಾಗರಿಕರ ಸಂಸ್ಥೆಗಳು- ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.) ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು ಗೀತಾಂಜಲಿ ಸಭಾಂಗಣದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2020 ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಅಧ್ಯಕ್ಷತೆ ವಹಿಸಿದರು.

ಸಭೆಯಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಶ್ರೀ ಪುಂಡಲೀಕ ಗಾಣಿಗ ಮತ್ತು ಶ್ರೀ ವಿಶು ಶೆಟ್ಟಿ ಅಂಬಲಪಾಡಿ ಯವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಸಂಧ್ಯಾ ಕಾಮತ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ ಶೆಟ್ಟಿ, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ ಕೊಡಂಚ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಶೇಷಪ್ಪ ಆರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಚಂದ್ರ ನಾಯ್ಕ್ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ, ಶ್ರೀಮತಿ ಕಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯೆ ಮತ್ತು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker