ಕರಾವಳಿ

ಮಕ್ಕಳ ಹಕ್ಕುಗಳ ಹೋರಾಟಗಾರ, ʼನಮ್ಮಭೂಮಿʼ ಸಂಸ್ಥಾಪಕ ʼದಾಮೋದರ ಆಚಾರ್ಯʼ ನಿಧನ

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಕ್ಕಳ ಹಕ್ಕುಗಳ ಹೋರಾಟಗಾರ ಹಾಗೂ ಸಿಡಬ್ಲ್ಯುಸಿ ನಮ್ಮ ಭೂಮಿ ಸಂಸ್ಥೆಯ ಸಂಸ್ಥಾಪಕರಾದ ಬಿ.ದಾಮೋದರ ಆಚಾರ್ಯ (63) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಹಳ್ಳಿಬಿಟ್ಟು ಪಟ್ಟಣಕ್ಕೆ ವಲಸೆ ಬಂದು ಹೋಟೆಲ್‌ಗಳಲ್ಲಿ ದುಡಿಯುತ್ತಿದ್ದ ಮಕ್ಕಳ ಹಕ್ಕುಗಳ ರಕ್ಷಣೆಗೆ ದಾಮೋದರ ಆಚಾರ್ಯ ಅವರು ಬೆಂಗಳೂರಿನಲ್ಲಿ ‘ಗ್ರಾಮಾಶ್ರಮ’ ಸಂಸ್ಥೆ ಆರಂಭಿಸಿದ್ದರು. ಕುಂದಾಪುರದ ಕನ್ಯಾನದಲ್ಲಿ ‘ನಮ್ಮ ಭೂಮಿ’ ಸಂಸ್ಥೆ ಹುಟ್ಟುಹಾಕಿ ಬಡ ಹಾಗೂ ವಲಸೆ ಕಾರ್ಮಿಕರ ಮಕ್ಕಳಿಗೆ ಸ್ವಉದ್ಯೋಗ ತರಬೇತಿ ನೀಡುತ್ತಿದ್ದರು. ಇದುವರೆಗೂ ಈ ಸಂಸ್ಥೆಯಿಂದ 1,500ಕ್ಕೂ ಹೆಚ್ಚು ಮಕ್ಕಳು ತರಬೇತಿ ಪಡೆದು ಭವಿಷ್ಯ ರೂಪಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.

ಬಿ.ದಾಮೋದರ ಆಚಾರ್ಯ ಅವ್ರಿಗೆ ಪತ್ನಿ, ಇಬ್ಬರು ಪುತ್ರರಿದ್ದು, ಬುಧವಾರ ಹುಟ್ಟೂರು ಕುಂದಾಪುರ ತಾಲ್ಲೂಕಿನ ಬಸ್ರೂರಿನ ಮೂಡುಕೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker