ರಾಜ್ಯ

ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ; ಅದಕ್ಕಾಗಿ BJPಯಲ್ಲಿ ಕಿತ್ತಾಟವಿದೆ: ಕಾಂಗ್ರೆಸ್‌ ಆರೋಪ

ಕೊರೊನಾ ಕಾಲಘಟ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಪೂರ ಲೂಟಿಗೆ ಬಳಸಿಕೊಳ್ಳುತ್ತಿವೆ. ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ ಎಂದು ಬಿಜೆಪಿ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ  ಬಗ್ಗೆ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ, ಈ ಹೆಣದ ಮೇಲಿನ ಹಣಕ್ಕಾಗಿಯೇ ಬಿಜೆಪಿಯಲ್ಲಿ ಕಿತ್ತಾಟ ಶುರುವಾಗಿರುವುದು, ಪಿಎಂ ಕೇರ್ಸ್‌ನಿಂದ ಹಿಡಿದು ಔಷಧ ಕಾಳಸಂತೆ, ಲಸಿಕೆ ಬ್ಲಾಕಿಂಗ್‌ವರೆಗೂ ಇವರ ಬಾಚಿ ತಿನ್ನುವ ಕೈಗಳು ಚಾಚಿವೆ ಎಂದು ಆರೋಪಿಸಿದೆ.

ಆರೋಗ್ಯ ತುರ್ತು ಪರಿಸ್ಥಿತಿಯನ್ನು ರಾಜ್ಯ ಬಿಜೆಪಿ ನಾಯಕರು ಹಣ ದೋಚಲು ಬಳಸಿಕೊಳ್ಳುತ್ತಿರುವುದು ಅತ್ಯಂತ ನೀಚ ಹಾಗೂ ಅಮಾನವೀಯ. ಕೇಂದ್ರದ ಲಸಿಕೆ ಅನ್ಯಾಯದ ವಿರುದ್ಧ ತುಟಿ ಬಿಚ್ಚದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತೇಜಸ್ವಿ ಹಾಗೂ ರವಿ ಸುಬ್ರಮಣ್ಯ ಬಡವರ ವ್ಯಾಕ್ಸಿನ್ ಕಳ್ಳತನ ಮಾಡಿದ್ದರ ಬಗ್ಗೆ ಇನ್ನೂ ತನಿಖೆ ಏಕಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

 

 

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker