ಕರಾವಳಿ

ಉಡುಪಿ: 735 ಮಂದಿಗೆ ಕರೋನಾ ಸೋಂಕು

ಉಡುಪಿ:ಇಂದು 735 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿ ತಾಲೂಕಿನಲ್ಲಿ 277, ಕುಂದಾಪುರ ತಾಲೂಕಿನಲ್ಲಿ 201, ಕಾರ್ಕಳ ತಾಲೂಕಿನಲ್ಲಿ‌ 252 ಹಾಗೂ ಹೊರ ಜಿಲ್ಲೆಯ ಐದು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5205 ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಮೂವರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 62 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 55 ಹಾಗೂ 69 ವರ್ಷದ ವ್ಯಕ್ತಿಗಳು ಕೋವಿಡ್ ನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 336 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮೇ 31ರಂದು ಜಿಲ್ಲೆಯಲ್ಲಿ 619 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 30,500 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 227654 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 35851 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಇಂದು ಹೊರ ಜಿಲ್ಲೆಯ ಓರ್ವ ಬ್ಲ್ಯಾಕ್ ಫಂಗಸ್ ಸೋಂಕಿತ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಜಿಲ್ಲೆಯಲ್ಲಿ 10 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker