ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; SSLC ಪರೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಪ್ರಥಮ ಪಿಯುಸಿ ಗ್ರೇಡಿಂಗ್ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು ಹೇಳಿದ್ದಾರೆ. ಇನ್ನು, ಈ ಫಲಿತಾಂಶ ಸಮಾಧಾನ ನೀಡದಿದ್ರೆ ಕೊರೋನಾ ಕಡಿಮೆಯಾದ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು, ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದ್ದು 6 ಪರೀಕ್ಷೆಯ ಬದಲು ಕೇವಲ 2 ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದು, ಎಸ್ ಎಸ್ ಎಲ್ ಸಿ ತರಗತಿಯ ವಿಷಯಗಳಾದ ಕನ್ನಡ, ಇಂಗ್ಲಿಷ್ ಹಾಗು ಹಿಂದಿ ಸೇರಿದಂತೆ ಮೂರನೇ ಭಾಷೆಯನ್ನು ಸೇರಿಸಿ ಒಂದು ಪರೀಕ್ಷೆಯಾಗಿ ಮತ್ತು ಗಣಿತ, ವಿಜ್ಞಾನ ಹಾಗು ಸಮಾಜ ವಿಜ್ಞಾನ ವಿಷಯಗಳನ್ನು ಸೇರಿಸಿ ಕೇವಲ ಎರಡು ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker