ತಾಜಾ ಸುದ್ದಿಗಳು

11 ಜಿಲ್ಲೆಗಳು ಇನ್ನೊಂದು ವಾರ ಲಾಕ್ ಡೌನ್ !

ಬೆಂಗಳೂರು: ರಾಜ್ಯದಲ್ಲಿ ಸೋಂಕು ಇಳಿಕೆ ಕಂಡುಬಂದಿರುವ ಕಾರಣ ಜೂನ್ 14ರಿಂದ ಅನ್‍ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದರು.

ಶೇಕಡಾ 5ಕ್ಕಿಂತ ಹೆಚ್ಚು ಸೋಂಕಿರುವ 11 ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್‍ ಡೌನ್ ವಿಸ್ತರಣೆಗೆ ಸರ್ಕಾರ ಮುಂದಾಗಿದೆ. ಸೋಂಕು ಹೆಚ್ಚಿರೋ ಕಾರಣದಿಂದಾಗಿ, ಅನ್‍ಲಾಕ್ ಪ್ರಕ್ರಿಯೆಯಿಂದ ಈ ಜಿಲ್ಲೆಗಳನ್ನು ಹೊರಗಿಡಲಾಗಿದೆ. ಅನ್‍ಲಾಕ್ ಪ್ರಕ್ರಿಯೆ ಆರಂಭವಾದ್ರೂ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಿಲ್ಲ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಪರಿಷ್ಕೃತ ನಿಯಮಗಳು ಜೂ.14 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂ.21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಏನಿರುತ್ತೆ? ಏನಿರಲ್ಲ?
• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ.

• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ.

• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿOದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿOದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker