ಕರಾವಳಿ

ಉಡುಪಿ : ಜಿಲ್ಲೆಯಲ್ಲಿ 174 ಕೋವಿಡ್ ಪಾಸಿಟಿವ್ ಪ್ರಕರಣ !!!

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇಂದು 174 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಪೈಕಿ ಉಡುಪಿಯಲ್ಲಿ 72, ಕುಂದಾಪುರ 55, ಕಾರ್ಕಳ 44 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1885 ಕ್ಕೆ ಇಳಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಕಾರ್ಕಳದ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.18ರಂದು ಜಿಲ್ಲೆಯಲ್ಲಿ 454 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,513 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,190 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,934 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 5 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 18 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker