ತಾಜಾ ಸುದ್ದಿಗಳು

ವಿಟ್ಲ: ಕಾಲೇಜು ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ!!

ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಕಾರಣ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ.

ಬಸ್ಸಿನಲ್ಲಿ ಸುಮಾರು 13 ಜನರಿದ್ದು, ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಫ್ ನರ್ಸ್ ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಜಾಕೀರ್ ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಮರದ ಬುಡದಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದಲ್ಲಿ ಪ್ರಪಾತ ಇದ್ದು, ಮಹಿಳೆಯೊಬ್ಬರು ಕೆಳಗಡೆ ಉರುಳಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker