ತಾಜಾ ಸುದ್ದಿಗಳು

ವಿವಾಹವಾದ ಕೆಲ ಗಂಟೆಯಲ್ಲೇ ಮದುಮಗಳು ರಸ್ತೆ ಅಪಘಾತಕ್ಕೆ ಬಲಿ!!

ವಿಜಯಪುರ: ಮದುವೆಯಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದಲ್ಲಿ ನಡೆದಿದೆ.

ಟೆಂಪೋ ಹಾಗೂ ಕ್ರೂಸರ್ ಮಧ್ಯೆ‌ ಮುಖಾಮುಖಿ ಢಿಕ್ಕಿಯಾದ ಪರಿಣಾಮ ನವ ವಿವಾಹಿತೆ ರಾಣಿ ಗಣೇಶ್ ಚವ್ಹಾಣ ಸ್ಥಳದಲ್ಲೇ ಮೃತಪಟ್ಟಿದ್ದು, ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ನಂತರ ಶಂಕರವಾಡಿ ಗ್ರಾಮದಿಂದ ಕೊಕಟನೂರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಟೆಂಪೋ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker