ಕರಾವಳಿ

250 ಹಾಸಿಗೆಗಳ ಉಡುಪಿ ಜಿಲ್ಲಾ ಆಸ್ಪತ್ರೆಗೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರೊಂದಿಗೆ ಶಾಸಕ ರಘುಪತಿ ಭಟ್ ಶಂಕು ಸ್ಥಾಪನೆ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಬೆಂಗಳೂರು ಹಾಗೂ ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಸಹಯೋಗದೊಂದಿಗೆ 250 ಹಾಸಿಗೆಗಳ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಇಂದು ದಿನಾಂಕ 12-08-2021 ರಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಕೆ. ಸುಧಾಕರ್ ಅವರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ತ್ರಿಲೋಕಚಂದ್ರ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker