ರಾಜ್ಯ

ಸಿ ಎಂ ಬಸವರಾಜ್ ಬೊಮ್ಮಯ್ಯ ರಾಜ್ಯದಲ್ಲಿ ಮತ್ತೆ ಕಠಿಣ ನಿಯಮಗಳ ಬಗ್ಗೆ ನಾಳೆಯ ಸಭೆಯಲ್ಲಿ ಅಧಿಕೃತ ನಿರ್ಧಾರ ಪ್ರಕಟ..!

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ  ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯುಲಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ನಾಳೆ ಈ ಬಗ್ಗೆ ಸಭೆಯಲ್ಲಿ ಅಧಿಕೃತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬ0ಧಿಸಿದoತೆ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ನಾಳೆಯ ಸಭೆಯ ಬಳಿಕ ವಿಕೆಂಡ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಕೂಡ ಹೇಳಲಾಗುತ್ತಿದೆ. ಈಗಾಗಲೇ ಲಾಕ್ ಡೌನ್ ನಿಂದ ಸೊರಗಿ ಹೋಗಿರುವ ಜನರಿಗೆ ಮತ್ತೊಂದು ಸುತ್ತಿನ ಲಾಕ್ ಡೌನ್ ಭೀತಿ ಕೂಡ ಸೃಷ್ಟಿಯಾಗಿದೆ. ನಾಳೆಯ ಸಭೆಯ ಬಳಿಕ ಸರ್ಕಾರ ಮುಂದೆ ತೆಗೆದುಕೊಳ್ಳುವ ನಿರ್ಧಾರಗಳು ಅಧಿಕೃತವಾಗಿ ತಿಳಿದು ಬರಬಹುದು ಎಂದು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker