ರಾಷ್ಟ್ರೀಯ

ಪರಮ್ ಬೀರ್ ಸಿಂಗ್ ಗೆ 25 ಸಾವಿರ ರೂ. ದಂಡ ವಿಧಿಸಿದ ವಿಚಾರಣಾ ಆಯೋಗ…!

ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಇದೇ ಮಾರ್ಚ್ ತಿಂಗಳಲ್ಲಿ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ವಿರುದ್ಧ ಪರಮ್ ಬೀರ್ ಸಿಂಗ್ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಈ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್ ಚಂದ್ ಚಾಂಡಿವಾಲ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು.

ಬುಧವಾರ ಈ ಪ್ರಕರಣದ ವಿಚಾರಣೆ ನಿಗದಿಯಾಗಿತ್ತು. ಆದರೆ, ಪರಮ್ ಬೀರ್ ಸಿಂಗ್ ವಿಚಾರಣೆಗೆ ಹಾಜರಾಗಲು ವಿಫಲವಾದ ಕಾರಣ, ಆಯೋಗ ಅವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ.
ಕಳೆದ ವಿಚಾರಣೆಗೆ ಗೈರಾದ ವೇಳೆಯಲ್ಲಿ ತನಿಖಾ ಆಯೋಗ ‘ನಿಮಗೆ ಇದು ಕೊನೆ ಅವಕಾಶ’ ಎಂದು ಎಚ್ಚರಿಕೆ ನೀಡಿ ಅವರಿಗೆ ವಿಚಾರಣಾ ಆಯೋಗ 5 ಸಾವಿರ ರೂಪಾಯಿ ದಂಡ ವಿಧಿಸಿತ್ತು.

 

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker