ರಾಷ್ಟ್ರೀಯ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ..!

ನವದೆಹಲಿ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶರಾಗಿದ್ದಾರೆ.

ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ನವದೆಹಲಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಕಳೆದ 51 ದಿನಗಳ ಹಿಂದೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.

ಕಲ್ಯಾಣ್ ಸಿಂಗ್ ನಿಧನಕ್ಕೆ ಪಿಎಂ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker