ರಾಜ್ಯ
Trending

ಬಿಎಂಟಿಸಿ ಉದ್ಯೋಗಿಗೆ ಕೊರೊನಾ ಪಾಸಿಟಿವ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು !

ಬೆಂಗಳೂರು: ಕೊರೊನಾ ವೈರಸ್  ಸೋಂಕು ಬೆಂಗಳೂರಿನ ಬಿಎಂಟಿಸಿ ಉದ್ಯೋಗಿಯೊಬ್ಬರಿಗೆ ತಗುಲಿರುವುದು ದೃಢಪಟ್ಟಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಲು ಆರಂಭಿಸಿದ್ದಾರೆ.

ಕೊರೊನಾ ವೈರಸ್  ಸೋಂಕಿತ ಬಿಎಂಟಿಸಿ ಉದ್ಯೋಗಿ ಯು ಮೂರು ದಿನಗಳ ರಜೆಯಲ್ಲಿದ್ದು ಈತ ಸ್ವಯಂ ಪ್ರೇರಿತವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು.ಇವರಿಗೆ ಸೋಂಕು ಪಾಸಿಟಿವ್ ಇದೆ ಎಂಬ ವರದಿ ಜೂನ್ 10 ಕ್ಕೆ ಬಂದಿತ್ತು. ಇವರಿಗೆ ಜ್ವರ ಅಥವಾ ಆರೋಗ್ಯ ಸಮಸ್ಯೆಯ ಯಾವುದೇ ಲಕ್ಷಣಗಳು ಇರಲಿಲ್ಲ ಎನ್ನಲಾಗಿದೆ.ಬಿಎಂಟಿಸಿ ಉದ್ಯೋಗಿಯು ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರಯಾಣದ ಹಿನ್ನೆಲೆಯನ್ನು ಹೊಂದಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆಯಂತೆ ಮುಂದಿನ ಕ್ರಮಗಳನ್ನು ಪ್ರಾರಂಭಿಸಲಾಗುವುದು ಮತ್ತು  ಬಿಎಂಟಿಸಿ ಸಂಸ್ಥೆ ನೌಕರರ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಬಿಎಂಟಿಸಿ ತಿಳಿಸಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker