ಕರಾವಳಿ

ಶೇ.5.05 ಪಾಸಿಟಿವಿಟಿ ದರ ಇರುವ ಉಡುಪಿ ಅನ್ ಲಾಕ್ ಆಗುತ್ತಾ ?!!!

ಉಡುಪಿ : ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನೀಡಿದ ಆದೇಶದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿಯನ್ನು ಸೇರಿಸಿ ಅನ್ ಲಾಕ್ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ರವರು ಯಡಿಯೂರಪ್ಪನವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಪರೀಕ್ಷೆ ನಡೆದಿದ್ದು, ಪ್ರಸ್ತುತ ದಿನಕ್ಕೆ 3 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಅದರಲ್ಲಿ ಶೇ.5.05 ಪಾಸಿಟಿವಿಟಿ ದರ ಇರುವುದರಿಂದ ಉಡುಪಿ ಜಿಲ್ಲೆಯನ್ನು ಅನ್ ಲಾಕ್  ಮಾಡಬಹುದು. ಇಲ್ಲವಾದರೆ ಎಲ್ಲಾ ವರ್ಗದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ ಅವರು, ಲಾಕ್ ಡೌನ್ ನಿಂದ ಸಣ್ಣ ಪುಟ್ಟ ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವರ್ಗದ ಜನ ಸಂಕಷ್ಟಕ್ಕೊಳಗಾಗಿರುವುದರಿಂದ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಅನ್ ಲಾಕ್ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker